ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟದ ನಾಲ್ಕನೇ ವರ್ಷದ ಸರ್ವ ಸದಸ್ಯರ ಸಭೆಯು ದಿನಾಂಕ 29-12-2024 ರಂದು ಭಾನುವಾರ ಬೆಳಿಗ್ಗೆ ಗಂಟೆ 11ಕ್ಕೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡನ ಗುಡ್ಡೆ ಉಡುಪಿ ಯಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಶ್ರೀ ರಮಾನಂದ ಗುರೂಜಿಯವರ
ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಆಶೀರ್ವಾದದಲ್ಲಿ ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಡಾ.ಕಟೀಲು ಸಂಜೀವ ಮಡಿವಾಳರ ಸಭಾ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮಡಿವಾಳ ಜ್ಯೋತಿ ಬಿರುದು ನೀಡಿ ಶ್ರೀ ಶ್ರೀ ರಮಾನಂದ ಗುರೂಜಿಯವರಿಗೆ ರಾಜ್ಯ ಒಕ್ಕೂಟದ ವತಿಯಿಂದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಘಟಕದ ಎಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಘಟಕ ತಾಲೂಕು ಘಟಕ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು



Leave a Reply